ಬೆಂಗಳೂರು, ಫೆ 15 (DaijiworldNews/HR): ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ವಿಧಾನಸಭೆ ಕಲಾಪದಲ್ಲಿ ಅಂಗೀಕಾರವಾಗಿದ್ದು, ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ವಾಪಸಾತಿ ಮಾಡಿ ಸದನದಲ್ಲಿ ವಿಧೇಯಕ ಮಂಡಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.
ಅಂಗಡಿ-ಮುಂಗಟ್ಟುಗಳ ಮುಂದಿನ ಸೂಚನಾ ಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದರು.
ಇನ್ನು ಅಧಿವೇಶನ ನಿಗದಿಯಾದ ಹಿನ್ನೆಲೆ ಸರ್ಕಾರಕ್ಕೆ ವಾಪಸ್ ಕಳಿಸಿದ್ದು, ವಿಧೇಯಕ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚನೆ ನೀಡಿದ್ದರು. ಅದರಂತೆಯೇ ಈಗ ವಿಧಾನಸಭೆ ಕಲಾಪದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ.