ಔರಂಗಾಬಾದ್, ಫೆ 16(DaijiworldNews/SK): ಕಳೆದ ವರ್ಷದ ಮೇ ತಿಂಗಳಿನಿಂದ ಈಶಾನ್ಯ ರಾಜ್ಯಗಳು ಜನಾಂಗೀಯ ಕಲಹದಿಂದ ನಲುಗಿವೆ ಹೋಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಔರಂಗಾಬಾದ್ನಲ್ಲಿ ನಡೆಯುತ್ತಿರುವ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ಅವರು, ಬಿಜೆಪಿಯು ಒಂದು ಸಮುದಾಯದ ವಿರುದ್ಧ ಮತ್ತೊಂದು ಸಮುದಾಯವನ್ನು ಎತ್ತಿಕಟ್ಟುವ ಮೂಲಕ ಮಣಿಪುರದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ.
ಇನ್ನು ಕೇಂದ್ರ ಸರ್ಕಾರವು ಶ್ರೀಮಂತರ 14 ಲಕ್ಷ ಕೋಟಿ ರೂ. ಸಾಲವನ್ನು ಮನ್ನಾ ಮಾಡಿದೆ. ಆದರೆ ನರೇಗಾ ಯೋಜನೆಗೆ ಕೇವಲ 70,000 ಕೋಟಿ ರೂ. ಮಾತ್ರ ವೆಚ್ಚ ಮಾಡಿರುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.