ಬೆಂಗಳೂರು, ಫೆ 15 (DaijiworldNews/MS): ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಆರೋಗ್ಯ ಕ್ಷೇತ್ರಕ್ಕೂ ಹೆಚ್ಚಿನ ಒತ್ತು ನೀಡಿದ್ದಾರೆ. ಅವುಗಳ ಪ್ರಮುಖ ಅಂಶ ಇಲ್ಲಿದೆ:
ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದಕ್ಯಾನ್ಸರ್ ಅನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು
20 ಜಿಲ್ಲಾ ಆಸ್ಪತ್ರೆಗಳಲ್ಲಿ ಡಿಜಿಟರ್ ಮ್ಯಾಮೋಗ್ರಾಫಿ ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ colposcopy ಉಪಕರಣಗಳ ಖರೀದಿಗೆ ಒಟ್ಟಾರೆಯಾಗಿ 21 ಕೋಟಿ ರೂ.ಗಳ ಅನುದಾನ ಒದಗಿಸಲಾಗುವುದು.
ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಮತ್ತು ನಿರಂತರ ಅನುಸರಣೆಗಾಗಿ ಬಹುತೇಕ ಜಿಲ್ಲೆಗಳಲ್ಲಿ ಕೀಮೋಥೆರಪಿ ಚಿಕಿತ್ಸಾ ಕೇಂದ್ರಗಳು
ಲಭ್ಯವಿರದ ಕಾರಣ, ಸರ್ಕಾರವು 20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರವನ್ನು
ಸ್ಥಾಪಿಸಲಾಗುವುದು.
ಮದುಮೇಹ ನಿಯಂತ್ರಣಕ್ಕಾಗಿ ಸಾರ್ವಜನಿಕ ಆಯ್ಷ್ ಚಿಕಿತ್ಸೆ ನೀಡಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ ತಲಾ ಒಂದು ಆಯುರ್ವೇದ ಮಧುಮೇಹ ಘಟಕಗಳನ್ನು ಸ್ಥಾಪಿಸಲಾಗುವುದು.
ಮುುಂದಿನ ಎರಡು ವರ್ಷಗಳಲ್ಲಿ ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗೆಗಳಲ್ಲಿ Hub and Spoke ಮಾದರಿಯಲ್ಲಿ ವಿಸ್ತರಿಸುವ ಮೂಲಕ STEMI (ತೀವ್ರ ಹೃದ್ರೋಗ) ಚಿಕಿತ್ಸೆ ಬಲಪಡಿಸಲಾಗುವುದು.