ಹುಬ್ಬಳ್ಳಿ, ಫೆ 19 (DaijiworldNews/ AK): ಶಾಲೆ, ಹಾಸ್ಟೆಲ್ ಗಳಲ್ಲಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಸ್ನಿಸಿ ಎಂಬುದನ್ನು ಬರೆಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮುಟ್ಟಾಳತನವನ್ನು ತೋರಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ ಅವರು, , ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ನ ತುಷ್ಟೀಕರಣದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬುದು ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯ. ಇದನ್ನು ತಿದ್ದುಪಡಿ ಮಾಡುವ ಮೂಲಕ ಕುವೆಂಪು ಅವರಿಗೂ ಈ ಸರ್ಕಾರ ಅವಮಾನ ಮಾಡಿದೆ ಎಂದು ಕಿಡಿಕಾರಿದ್ದರು.
ಈ ಸರ್ಕಾರ, ಕುವೆಂಪು ಅವರ ಘೋಷ ವಾಕ್ಯವನ್ನೇ ಬದಲಾಯಿಸಿದೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ದೃಷ್ಟಿಯಲ್ಲಿ ಕುವೆಂಪು ಜಾತ್ಯಾತೀತರಲ್ಲವೇ ಎಂದು ಪ್ರಶ್ನಿಸಿದರು. ಹಿಂದೂ ವಿರೋಧಿ ನಡೆ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂದಿರುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿರುವ ಜೋಶಿ ಅವರು, ಇದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.