ಬೆಂಗಳೂರು, ಫೆ 20(DaijiworldNews/AK):ವಿಧಾನ ಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ ಗೆಲುವು ಪಡೆದಿದ್ದಾರೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಗೆ ಹಿನ್ನಡೆಯಾಗಿದೆ.
1506 ಮತಗಳ ಅಂತರದಿಂದ ಪುಟ್ಟಣ್ಣ ಗೆಲುವು ದಾಖಲಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಬೆಂಬಲಿಗರಿಂದ ಸಂಭ್ರಮಾಚರಣೆ ಮಾಡಿದ್ದಾರೆ.
ಇತ್ತ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್, ಮೈತ್ರಿಯ ಸೋಲು ಅಲ್ಲ. ಇದು ನನ್ನ ವೈಯಕ್ತಿಕ ಸೋಲು. ಆಡಳಿತ ದುರುಪಯೋಗ ಮಾಡಿಕೊಂಡಿದ್ದಾರೆ. ಒತ್ತಡ ಹಾಕಿ ಕೆಲಸ ಮಾಡಿಕೊಂಡಿದ್ದಾರೆ. ಹಣ ದುರುಪಯೋಗ ಮಾಡಿಕೊಂಡು ಗೆಲವು ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.