ಕಾರವಾರ, ಫೆ 25(DaijiworldNews/MS): ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್
ಎಂದು ಕರೆದಿದ್ದರು. ಸಿಎಂ ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಿದ್ರಮುಲ್ಲಾ ಖಾನ್ ಸರ್ಕಾರ ಇದೆ ಎಂದಿದ್ದರು. ಅಲ್ಲದೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳೆಂದು ಹೇಳಿದ್ದರು.
'ಧಾರ್ಮಿಕ, ಸಾಮಾಜಿಕವಾಗಿ ಅಪಮಾನಕರ ಮಾತುಗಳನ್ನಾಡಿರುವ ಹಿನ್ನೆಲೆಯಲ್ಲಿ ಸಂಸದರ ವಿರುದ್ಧ ಪ್ರ ಕರಣ ದಾಖಲಿಸಿಕೊಳ್ಳಲಾಗಿದೆ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೆ ಕುಮಟಾದಲ್ಲಿ ನಡೆದಿದ್ದ ಸಭೆಯಲ್ಲಿಯೂ ಅನಂತಕುಮಾರ ಪ್ರಚೋದನಕಾರಿ ಮಾತನಾಡಿದ್ದಕ್ಕೆ ಸ್ವಯಂಪ್ರೇರಿತ ಪ್ರಕರಣ
ದಾಖಲಿಸಿಕೊಳ್ಳಲಾಗಿತ್ತು.