ಹುಬ್ಬಳ್ಳಿ,ಫೆ 25(DajiworldNews/AK): ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣ ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ, ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ, ಅದರಿಂದ 8-10 ವರ್ಷ ವಿಳಂಬವಾಯಿತು. ಅತ್ಯಂತ ದೊಡ್ಡ ತಪ್ಪು ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಆರೋಪಿಸಿದರು.
ಟ್ರಿಬ್ಯೂನಲ್’ನಲ್ಲಿ ಬರೆದು ಕೊಟ್ಟು ಮಹದಾಯಿಯಿಂದ ಮಲಪ್ರಭಾ ಇಂಟರ್ ಲಿಂಕಿಂಗ್ ಜೋಡನೆಗೆ ಕಾಂಗ್ರೆಸ್’ನವರು ಗೋಡೆ ಕಟ್ಟಿದ್ದರು, ನೀರಾವರಿ ಯೋಜನೆಗೆ ಗೋಡೆಕಟ್ಟಿದ ಅಪಖ್ಯಾತಿ ಇದ್ದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಇದೆ. ನಾವು ಕಾಲುವೆ ಮಾಡಿದರೆ ಕಾಂಗ್ರೆಸ್ ನವರು ಗೋಡೆ ಕಟ್ಟಿದರು ಎಂದರು.