ಮೈಸೂರು, ಫೆ 25(DajiworldNews/SK): ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಕಾಂಗ್ರೆಸ್ ಸರಕಾರ ಎಸ್ಸಿಪಿ, ಟಿಎಸ್ಪಿ ಅನುದಾನ ಬಳಕೆ ಮಾಡಿದೆ ಎಂದು ಬಿಜೆಪಿ ನಾಯಕರು ಅರೋಪಿಸಿದ್ದಾರೆ. ಆದರೆ ಇದು ಶುದ್ಧ ಸುಳ್ಳೆಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಎಂ. ಲಕ್ಷ್ಮಣ್ ಅವರು, ಎಸ್ಸಿಪಿ, ಟಿಎಸ್ಪಿ ಯೋಜನೆಯನ್ನು ಜಾರಿಗೆ ತಂದ ಕೀರ್ತಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ. ಮತ್ತೆ ಹೇಗೆ ಅವರು ಈ ಅನುದಾನಗಳನ್ನು ಬಳಕೆ ಮಾಡಲು ಸಾಧ್ಯ? ಎಸ್ಸಿ, ಎಸ್ಟಿ ಮಕ್ಕಳಿಗೆ ಕೊಡುತ್ತಿದ್ದ ಸ್ಕಾಲರ್ ಶಿಪ್ ಅನ್ನು ನಿಲ್ಲಿಸಿದ್ದೇ ಬಿಜೆಪಿ ಸರಕಾರ ಎಂದು ಕಿಡಿಕಾರಿದ್ದಾರೆ.
ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟು ಕೊಂಡಿರುವ ಬಿಜೆಪಿಗೆ ಪರಿಶಿಷ್ಟರ ಮೇಲೆ ಎಲ್ಲಿಲ್ಲದ ಪ್ರೀತಿ ಮೂಡಿದೆ. ಪ್ರಮುಖವಗಿ 'ಬಿಜೆಪಿಯವರಿಗೆ ಎಸ್ಸಿಪಿ, ಟಿಎಸ್ಪಿ ಅಂದರೆ ಏನು ಅಂತಾನೇ ಗೊತ್ತಿಲ್ಲ. ವಾಸ್ತವ ಮರೆ ಮಾಚಿ ಜನತೆಗೆ ಸುಳ್ಳು ಸುದ್ದಿಯನ್ನು ಹರಡುತ್ತಿದ್ದಾರೆ ಎಂದಿದ್ದಾರೆ.