ನವದೆಹಲಿ, ಫೆ 26 (DaijiworldNews/HR): ವಾರಣಾಸಿಯ ಜ್ಞಾನವಾಪಿ ಆವರಣದಲ್ಲಿರುವ ದಕ್ಷಿಣದ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ಜ್ಞಾನವಾಪಿ ಸಂಕೀರ್ಣದ ‘ವ್ಯಾಸ್ ತೆಹ್ಖಾನಾ’ದಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ.
ಇನ್ನು ಈ ಹಿಂದೆ ಜನವರಿ 31 ರಂದು ವಾರಣಾಸಿ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಆವರಣದ ದಕ್ಷಿಣ ನೆಲಮಾಳಿಗೆಯೊಳಗೆ ಪೂಜೆ ಮಾಡಲು ಅವಕಾಶ ನೀಡಿತು.
ಭಕ್ತರು ಪೂಜೆ ಸಲ್ಲಿಸಲು ಅಗತ್ಯ ವ್ಯವಸ್ಥೆ ಮಾಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ ನ್ಯಾಯಾಲಯ, ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ಗೆ ಅರ್ಚಕರನ್ನು ನಾಮನಿರ್ದೇಶನ ಮಾಡುವಂತೆ ಸೂಚಿಸಿದೆ. ಇದರ ಬೆನ್ನಲ್ಲೇ ಮಸೀದಿ ಸಮಿತಿಯು ವಾರಣಾಸಿ ನ್ಯಾಯಾಲಯದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದು, ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಫೆಬ್ರವರಿ 15ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.