ಬೆಂಗಳೂರು, ಫೆ 26(DaijiworldNews/AK): 2023–24 ನೇ ಸಾಲಿನ 384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ.ಕೆಪಿಎಸ್ಸಿ ಪ್ರಭಾರಿ ಕಾರ್ಯದರ್ಶಿ ಡಾ. ರಾಕೇಶ್ ಕುಮಾರ್ ಕೆ ಅವರು ಇಂದು ಅಧಿಸೂಚನೆ ಹೊರಡಿಸಿದ್ದಾರೆ.
ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈದರ್ಬಾದ್ ಕರ್ನಾಟಕ ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ –ಎ’ 159, ‘ಗ್ರೂಪ್ –ಬಿ’ 225 ಹುದ್ದೆಗಳಿವೆ. ಒಟ್ಟು 77 ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು .
ಪದವಿ, ಸ್ನಾತಕೋ ತ್ತರ ಪದವಿ ಅಥವಾ ತತ್ಸಮಾನವಾದ ವಿದ್ಯಾರ್ಹತೆಯನ್ನು ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹ ರಾಗಿರುತ್ತಾರೆ..ಕನಿಷ್ಠ 21 ವರ್ಷ ವಯಸ್ಸು ಮೀರಿದವರು ಅರ್ಜಿ ಸಲ್ಲಿಸಲು ಅರ್ಹರು . ಸಾಮಾನ್ಯ ವರ್ಗ ದವರಿಗೆ ಗರಿಷ್ಠ ವಯೋಮಿತಿ 38, ಪ್ರವರ್ಗ 2ಎ, 2ಬಿ,3ಎ, 3ಬಿಗಳಿಗೆ 41 ವರ್ಷ , ಎಸ್ಸಿ, ಎಸ್ಟಿ, ಪ್ರವರ್ಗ –1 ಅಭ್ಯರ್ಥಿಗಳಿಗೆ 43 ವರ್ಷ .
ಪೂರ್ವ ಭಾವಿ ಪರೀಕ್ಷೆ (ಬಹುಆಯ್ಕೆ ಮಾದರಿಯ ಪ್ರಶ್ನೆಗಳು), ಮುಖ್ಯ ಪರೀಕ್ಷೆ (ವಿವರಣಾತ್ಮಕ) ಮತ್ತು ವ್ಯಕ್ತಿತ್ವ ಪರೀಕ್ಷೆ ಎಂಬ ಮೂರು ಹಂತಗಳಲ್ಲಿ ಈ ನೇಮಕಾತಿ ನಡೆಯಲಿದೆ. ವಿವರವಾದ ಅಧಿಸೂಚನೆಗೆ kpsc.kar.nic.in ವೈಬ್ ಸೈಟ್ಗೆ ಭೇಟಿ ನೀಡಬಹುದಾಗಿದೆ.