ಬೆಂಗಳೂರು, ಫೆ 27 (DaijiworldNews/HR): ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದಿ ವರದಿಯಾಗಿದೆ.
ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹ ಸಚಿವ ಪರಮೇಶ್ವರ್ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ಗೆ ಸೂಚಿಸಿದ್ದರು.
ಇನ್ನು ಅರ್ಹ ಪತಿ-ಪತ್ನಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.
ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿ ಬಂದಿದ್ದು, ಈ ಕುರಿತಾಗಿ ಪೊಲೀಸ್ ಸಿಬ್ಬಂದಿಯೊಬ್ಬರು ಸರ್ಕಾರಕ್ಕೆ ದಯಾಮರಣ ಕೋರಿ ಅರ್ಜಿ ಸಲ್ಲಿದ್ದರು.