ಹುಬ್ಬಳ್ಳಿ, ಫೆ 27(DaijiworldNews/SK): ಲೋಕಸಭೆ ಚುನಾವಣೆ 2024 ರಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಲ್ಹಾದ ಜೋಶಿ ಅವರು, ಹೆಚ್ಚು ಕಡಿಮೆ ಡಾ. ಎಸ್ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಆದರೆ ಕರ್ನಾಟಕ ಅಥವಾ ಇತರೆ ಬೇರೆ ಯಾವುದಾದರೂ ರಾಜ್ಯಗಳಿಂದ ಸ್ಪರ್ಧಿಸುತ್ತಾರೆ ಎಂಬುದರ ನಿಖರ ಮಾಹಿತಿ ಇಲ್ಲ ಎಂದಿದ್ದಾರೆ.
ಇನ್ನು ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರು ಸಂಸತ್ತಿನ ಮೇಲ್ಮನೆ, ರಾಜ್ಯಸಭೆಯ ಸದಸ್ಯರು. ಆದರೆ ಅವರು ಇವರೆಗೆ ಚುನಾವಣೆಯನ್ನು ಎದುರಿಸಿಲ್ಲ. ಈ ಬಾರಿ ಪಕ್ಷವು ಲೋಕಸಭೆ ಚುನಾವಣೆಗೆ ಇವರನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿದೆ ಎಂದು ಹೇಳಿದ್ದಾರೆ.