ಬೆಂಗಳೂರು, ಫೆ 27(DaijiworldNews/AK): ಕುತೂಹಲಕ್ಕೆ ಕೆರಳಿಸಿದ ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದೆ. ಕಾಂಗ್ರೆಸ್ ತನ್ನ ಪಾಲಿನ ಮೂರು ಸೀಟನ್ನು ಗೆದ್ದು ವಿಜಯಪತಾಕೆಯನ್ನು ಹಾರಿಸಿದೆ. ಇತ್ತ ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ.
ಆದರೆ, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಸೋಲಾಗಿದೆ. ಈ ಫಲಿತಾಂಶದ ಮೂಲಕ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ಲೆಕ್ಕಾಚಾರ ತಲೆಕೆಳಗಾಗಿದೆ. ಲೋಕಸಭಾ ಚುನಾವಣೆಗೂ ಮುನ್ನವೇ ಮೈತ್ರಿಗೆಿದು ಹೀನಾಯ ಸೋಲಾಗಿದೆ.
ಮತದಾನ ಮಾಡಿದ ಎಲ್ಲಾ 222 ಮತಗಳು ಸಹ ಸಿಂಧುವಾಗಿದ್ದು, ಕಾಂಗ್ರೆಸ್ನ ಅಜಯ್ ಮಾಕೇನ್ -47, ನಾಸೀರ್ ಹುಸೇನ್ – 47, ಜಿ.ಸಿ. ಚಂದ್ರಶೇಖರ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಂಡು ಗೆಲುವಿನ ನಗೆ ಬೀರಿದ್ದಾರೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಂದಿದೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಜೆಡಿಎಸ್ನ 19 ಮತಗಳು ಬಿದ್ದಿದ್ದರೆ, ಮಿತ್ರ ಪಕ್ಷ ಬಿಜೆಪಿಯಿಂದ 16 ಮತಗಳು ಮಾತ್ರ ಬಿದ್ದಿವೆ. ಈ ಮೂಲಕ ಕುಪೇಂದ್ರ ರೆಡ್ಡಿ ಸೋಲಾಗಿದೆ.
ಈ ಮೂಲಕ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ರಣತಂತ್ರಗಳನ್ನು ಹೆಣೆದು ತಮ್ಮ ಶಾಸಕರ ಜೊತೆ ಬಿಜೆಪಿ ಹಾಗೂ ಪಕ್ಷೇತರ ಶಾಸಕರ ಮತಗಳನ್ನು ಸೆಳೆಯುವಲ್ಲಿ ಈರಾಜ್ಯ ಸಭಾ ಚುನಾವಣೆಯಲ್ಲಿ ಯಶಸ್ವಿಯಾಗಿದ್ದಾರೆ.