ನವದೆಹಲಿ, ಫೆ 28 (DaijiworldNews/HR): ಹಿಮಾಚಲಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸುಖು ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿದ್ದು, ನನ್ನ ರಾಜೀನಾಮೆ ಕೇಳಿಲ್ಲ. ನಾನು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಸಲಾಗಿದೆ ಎಂದು ಸಿಂಗ್ ಸ್ಪಷ್ಟನೆ ನೀಡಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಬಿಜೆಪಿಯು ಲಕ್ಷ ಸುಳ್ಳು ಸುದ್ದಿಯನ್ನು ಹರಡುತ್ತಿದೆ ಎಂದು ಮುಖ್ಯಮಂತ್ರಿ ಸುಖುವಿಂದರ್ ಸುಖು ಆರೋಪಿಸಿದ್ದು, ಬಿಜೆಪಿ ಕಾಂಗ್ರೆಸ್ ಪಕ್ಷವನ್ನು ಒಡೆಯಲು ಬಯಸುತ್ತಿದೆ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ಶಾಸಕರು ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಳ್ಳಲಿ ಎಂಬುದು ಅವರ ಆಶಯವಾಗಿದೆ. ಆದರೆ ಕಾಂಗ್ರೆಸ್ ಶಾಸಕರು ಒಗ್ಗಟ್ಟಿನಿಂದ ಇದ್ದಿರುವುದಾಗಿ ತಿಳಿಸಿದ್ದಾರೆ.