ಮುಂಬೈ, ಫೆ 28 (DaijiworldNews/HR): ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಯೋಜನೆ ಅಡಿ 16ನೇ ಕಂತಿನ ಹಣವನ್ನು 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಬಿಡುಗಡೆ ಮಾಡಿದ್ದಾರೆ.
ಮಹಾರಾಷ್ಟ್ರದ ಯವತ್ಮಾಲ್ನಲ್ಲಿ ಸುಮಾರು 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಒಟ್ಟು 21,000 ಕೋಟಿ ರೂಗೂ ಹೆಚ್ಚಿನ ಮೊತ್ತವನ್ನು ಪ್ರಧಾನಿ ಮೋದಿ ರಿಮೋಟ್ ಬಟನ್ ಒತ್ತುವ ಮೂಲಕ ರವಾನೆ ಮಾಡಿದ್ದಾರೆ.
ಇನ್ನು 2019ರಲ್ಲಿ ಆರಂಭವಾದ ಪಿಎಂ ಕಿಸಾನ್ ಯೋಜನೆಯಲ್ಲಿ ಇಲ್ಲಿಯವರೆಗೆ 16 ಕಂತುಗಳನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ.