ಬೆಂಗಳೂರು, ಫೆ 29(DaijiworldNews/AA): ಬಿಜೆಪಿಗೆ ಪಾಕಿಸ್ತಾನ ಶತ್ರು ರಾಷ್ಟ್ರ ಇರಬಹುದು. ಆದರೆ ಕಾಂಗ್ರೆಸ್ಗೆ ಪಾಕಿಸ್ತಾನ ಶತ್ರು ರಾಷ್ಟ್ರ ಅಲ್ಲ ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ತಿಳಿಸಿದ್ದಾರೆ.
ವಿಧಾನ ಪರಿಷತ್ ಕಪಾಲದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಿಸಿದಂತೆ ನಡೆದ ಚರ್ಚೆಯ ಸಂದರ್ಭದಲ್ಲಿ ಬಿಕೆ ಹರಿಪ್ರಸಾದ್ ಅವರು, ಈ ರೀತಿಯ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ ಬಿಕೆ ಹರಿಪ್ರಸಾದ್ ಅವರು ಬಿಜೆಪಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಇನ್ನು ವಿಧಾನಸೌಧದಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ಎಸ್ಎನ್ ನಾರಾಯಣಸ್ವಾಮಿ ಅವರು, ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರು ಪಾಕಿಸ್ತಾನದ ವಿರುದ್ಧ ಯುದ್ಧ ಮಾಡಿದ್ದರು. ಪಾಕ್ ವಿರುದ್ಧ ಯುದ್ಧ ಮಾಡಿದ ಇಂದಿರಾಗಾಂಧಿ ಪಕ್ಷದವರು ನಾವು ಎಂದು ಎದೆತಟ್ಟಿ ಹೇಳಿದರು.