ಬೆಂಗಳೂರು, ಮಾ 02(DaijiworldNews/SK): "ಬ್ರ್ಯಾಂಡ್ ಬೆಂಗಳೂರು ಆಗದಿದ್ದರು ಪರವಾಗಿಲ್ಲ ಬಾಂಬ್ ಬೆಂಗಳೂರು ಮಾಡಬೇಡಿ" ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರದ ವಿರುದ್ದ ಅಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ಮಾಡಿದ ಅವರು, ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಕರ್ನಾಟಕದ ಶಾಂತಿಯ ತೋಟದಲ್ಲಿ ಶಾಂತಿ ಕದಡುವ ಭಯೋತ್ಪಾದಕ ಚಟುವಟಿಕೆ ನಡೆದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರವಹಿಸಿಕೊಂಡ ನಂತರ ದಿನೇ ದಿನೇ ಕುಸಿಯುತ್ತಿರುವ ಕಾನೂನು ಸುವ್ಯವಸ್ಥೆಗೆ ಮತ್ತೊಂದು ನಿದರ್ಶನವಾಗಿದೆ ಎಂದಿದ್ದಾರೆ.
ಸಿದ್ದರಾಮಯ್ಯ ಸಿಎಂ ಆದಾಗೆಲ್ಲಾ ಇಂತಹ ಪುಂಡ ಪೋಕರಿಗಳಿಗೆ ರೆಕ್ಕಪುಕ್ಕ ಬರುತ್ತದೆ. ಏನಾದರೂ ಮಾಡಿ ನಿಮ್ಮನ್ನು ಸೇಫ್ ಮಾಡುತ್ತೇನೆ ಎನ್ನುವ ಆಶ್ವಾಸನೆ ನೀಡಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದು, ಇದರ ಪರಿಣಾಮ ಅವರು ಎದೆಯುಬ್ಬಿಸಿ ಓಡಾಡುತ್ತಿದ್ದಾರೆ" ಎಂದು ತಿಳಿಸಿದ್ದಾರೆ.
ಇನ್ನು ಪ್ರಮುಖವಾಗಿ ರಾಜ್ಯದಲ್ಲಿ ನಿಮ್ಮ ಕಾನೂನು ಸುವ್ಯವಸ್ಥೆ, ನಿಮ್ಮ ಗುಪ್ತಚರ, ನಿಮ್ಮ ಸರ್ಕಾರ ಬದುಕಿದ್ದರೆ ಕಠಿಣ ಕ್ರಮ ಕೈಗೊಳ್ಳಿ. ವೋಟ್ ಪಾಲಿಟಿಕ್ಸ್ ಬಿಟ್ಟು ರಾಜ್ಯದ ಭದ್ರತೆ ದೃಷ್ಟಿಯಿಂದ ಸೂಕ್ತ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದ್ದಾರೆ.