ಬೆಂಗಳೂರು, ಮಾ 02(DaijiworldNews/AA): ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಪ್ರಕರಣವನ್ನು ಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದು, ತನಿಖಾಧಿಕಾರಿಯಾಗಿ ಎಸಿಪಿ ನವೀನ್ ಕುಲಕರ್ಣಿ ಅವರನ್ನು ನೇಮಕ ಮಾಡಲಾಗಿದೆ. ಇನ್ನು ಈ ಬಗ್ಗೆ ಹೆಚ್ಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಮೇಶ್ವರಂ ಕೆಫೆಯನ್ನು ಅಬ್ದುಲ್ ಕಲಾಂ ಅವರ ಸ್ಪೂರ್ತಿಯಿಂದ ತೆರೆಯಲಾಗಿದ್ದು, ಈ ಕೆಫೆಯು ದೇಶಾದ್ಯಂತ ಅನೇಕ ಬ್ರ್ಯಾಂಚ್ ಗಳನ್ನು ಹೊಂದಿದೆ. ಇನ್ನು ಶುಕ್ರವಾರ ಮಧ್ಯಾಹ್ನದ ವೇಳೆ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.