ಬೆಂಗಳೂರು, ಮಾ 06(DaijiworldNews/SK): ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಸರ್ಕಾರದ ಬ್ಯಾಕ್ ಲಾಕ್ ಹುದ್ದೆಗಳು ಹಾಗೂ ರಾಜ್ಯದಲ್ಲಿ ಖಾಲಿ ಇರುವ 2.50 ಲಕ್ಷ ಹುದ್ದೆಗಳನ್ನು ಅದಷ್ಟು ಬೇಗ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯಿಂದ ನಡೆದ ‘5ನೇ ರಾಜ್ಯ ಮಟ್ಟದ ಜಾಗೃತ ಸಮಾವೇಶ’ ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ. ಕಾಲಮಿತಿಯಡಿ ಏಕಗವಾಕ್ಷಿ ಪದ್ಧತಿಯನ್ನು ಅನುಸರಿಸಿ ಶೀಘ್ರ ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ನೌಕರರ ಬೇಡಿಕೆಯಂತೆ ಮೊದಲಿಗೆ 24 ಸಾವಿರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿಮಾಡಲಾಗುತ್ತದೆ. ತದನಂತರ ಮುಂದಿನ ಐದು ವರ್ಷದಲ್ಲಿ ರಾಜ್ಯದಲ್ಲಿ 2.50 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದಿದ್ದಾರೆ.