ಬೆಳಗಾವಿ, ಮಾ 07 (DaijiworldNews/AK): ಲೋಕಸಭೆ ಚುನಾವಣೆ ಬಳಿಕ ದಲಿತ ಸಿಎಂ ಬಗ್ಗೆ ದನಿ ಎತ್ತುತ್ತೇವೆ. ಈಗ ಲೋಕಸಭೆಯಲ್ಲಿ ಹೆಚ್ಚಿನ ಸೀಟು ಗೆಲ್ಲಲು ಆದ್ಯತೆ ನೀಡುತ್ತೇವೆ ಎಂದು ಸಚಿವ ಸತೀಶ ಜಾರಕಿಹೋಳಿ ಹೇಳಿಕೆ ನೀಡಿದ್ದಾರೆ.
ದಲಿತರು ಸಿಎಂ ಆಗಬೇಕೆಂಬ ಕೂಗು ಇಂದು, ನಿನ್ನೆಯದಲ್ಲ. ಇದು ಮಲ್ಲಿಕಾರ್ಜುನ ಖರ್ಗೆ ಅವರಿಂದ ಆರಂಭವಾಗಿದ್ದು, ದಲಿತರು ಸಿಎಂ ಆಗಬೇಕೆಂಬ ಬೇಡಿಕೆ ಕಾಂಗ್ರೆಸ್ ನಲ್ಲಿ ಅಷ್ಟೇ ಅಲ್ಲ. ಬಿಜೆಪಿ, ಜೆಡಿಎಸ್ ನಲ್ಲೂ ಇದೆಯಾದರೂ,ಇದುವರೆಗೆ ದಲಿತರು ಯಾವುದೇ ಪಕ್ಷದಲ್ಲಿ ಸಿಎಂ ಆಗಲು ಸಾಧ್ಯವಾಗಿಲ್ಲ ಎಂದರು
ಕಳೆದ 20 ವರ್ಷದಿಂದ ಮಲ್ಲಿಕಾರ್ಜುನ ಖರ್ಗೆ, 2013ರಲ್ಲಿ ಡಾ. ಜಿ. ಪರಮೇಶ್ವರ್ ಅವರು ಸಿಎಂ ಆಗಬೇಕೆಂಬ ಕೂಗು ಇತ್ತು. ಆದರೆ ಅವರಿಬ್ಬರಿಗೂ ಸಿಎಂ ಆಗುವ ಭಾಗ್ಯ ಸಿಗಲಿಲ್ಲ. ನಾನು ಅನೇಕ ಸಮಾವೇಶಗಳಲ್ಲಿ ದಲಿತರು ಸಿಎಂ ಆಗಲೇಬೇಕೆಂದು ಹೇಳಿದ್ದೇನೆ ಎಂದರು.
ಬೆಳಗಾವಿ, ಚಿಕ್ಕೋ ಡಿ ಕ್ಷೇತ್ರಗಳ ಲೋಕಸಭೆ ಅಭ್ಯರ್ಥಿಗಳ ಹೆಸರು 1ನೇ ಪಟ್ಟಿಯಲ್ಲಿ ಆಗುವುದಿಲ್ಲ. ಎರಡನೇ ಪಟ್ಟಿಯಲ್ಲಿ ಬಿಡುಗಡೆಯಾಗುತ್ತದೆ. ಎಂದರು.