ಅಸ್ಸಾಂ, ಮಾ 09 (DaijiworldNews/MS): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಸಂರಕ್ಷಿತ ಪ್ರದೇಶದೊಳಗೆ ಆನೆ ಸಫಾರಿ ಮತ್ತು ಜೀಪ್ ಸವಾರಿ ಆನಂದಿಸಿದರು. ಮೋದಿ ಆನೆಯ ಮೇಲೆ ಸವಾರಿ ಮಾಡುತ್ತಾ ಉದ್ಯಾನವನದಲ್ಲಿ ಸ್ವಲ್ಪ ದೂರ ಪ್ರಯಾಣಿಸಿದರು.ಯುನೆಸ್ಕೋ ವಿಶ್ವ ಪರಂಪರೆಯ ತಾಣಕ್ಕೆ ಚೊಚ್ಚಲ ಭೇಟಿ ನೀಡಿದ ಪ್ರಧಾನಿ ಮೋದಿ, ಮೊದಲು ಉದ್ಯಾನವನದ ಸೆಂಟ್ರಲ್ ಕೊಹೊರಾ ಶ್ರೇಣಿಯ ಮಿಹಿಮುಖ್ ಪ್ರದೇಶದಲ್ಲಿ ಆನೆ ಸಫಾರಿ ಮಾಡಿದರು.
ಅಸ್ಸಾಂನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಎರಡನೇ ದಿನದ ಪ್ರವಾಸದಲ್ಲಿದ್ದು,ಕಾಜಿರಂಗ ಉದ್ಯಾನವನದಲ್ಲಿ ಆನೆಯ ಮೇಲೆ ಸವಾರಿ ಮಾಡುತ್ತಾ ಸೂರ್ಯೋದಯದ ಸುಂದರ ದೃಶ್ಯವನ್ನೂ ವೀಕ್ಷಣೆ ಮಾಡಿದರು.
ಪ್ರಧಾನಿ ಮೋದಿ ಇಂದು ಅಸ್ಸಾಂನಲ್ಲಿ 18 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಹಾನ್ ಅಹೋಮ್ ಕಮಾಂಡರ್ ಲಚಿತ್ ಬೊರ್ಫುಕನ್ ಅವರ 125 ಅಡಿ ಎತ್ತರದ ಪ್ರತಿಮೆಯನ್ನು ಸಹ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.