ಬೆಂಗಳೂರು,ಮಾ 11 (DajiworldNews/AK): ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತರುವ ತೀರ್ಮಾನ ತೆಗೆದುಕೊಂಡಿದ್ದಾರೆ. ಇದು ಖಂಡನೀಯ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ ಕಾರಿದ್ದಾರೆ.
ಮಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರ ಮೂರುವರೆ ವರ್ಷ ನಿದ್ರೆ ಮಾಡುತ್ತಿತ್ತು. ಈಗ ಎಲೆಕ್ಷನ್ ಬಂದಿದೆ, ಈ ಅಸ್ಸಾಂ ಪಶ್ಚಿಮ ಬಂಗಾಳದಲ್ಲಿ ಜಾತಿ ಹೋರಾಟ ನಡೆಯಿತು. ಈ ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲಾ ಜಾತಿ ಧರ್ಮ ರಕ್ಷಣೆ ಮಾಡುವುದು ನಮ್ಮ ಪಕ್ಷದ ಕರ್ತವ್ಯ. ಹೀಗಾಗಿ ಸಿಎಎ (CAA) ಜಾರಿಗೆ ತಂದಿರುವ ನಿರ್ಧಾರವನ್ನು ಖಂಡಿಸುವುದಾಗಿ ಡಿಕೆಶಿ ಹೇಳಿದರು.
ಇದೇ ವೇಳೆ ಚುನಾವಣೆಗೆ ಕಾಂಗ್ರೆಸ್ ಲಿಸ್ಟ್ ಬಗ್ಗೆ ಪ್ರತಿಕ್ರಿಯಿಸಿ, ಸ್ಕ್ರೀನಿಂಗ್ ಕಮಿಟಿ ಸಭೆ ಆಗಿದೆ. ಹೆಚ್ಚು ಕಡಿಮೆ ಎಲ್ಲಾ ಚರ್ಚೆ ಆಗಿದೆ. ಎಲ್ಲಾ ಹೆಸರುಗಳನ್ನು ಚರ್ಚೆ ಆಗಿದೆ. ಕೆಲವು ಸಿಂಗಲ್ ನೇಮ್ ಬಗ್ಗೆಯೂ ಸಹ ಚರ್ಚೆ ಆಗಿದೆ. ಸೆಂಟ್ರಲ್ ಎಲೆಕ್ಷನ್ ಕಮಿಟಿ ಯಾವತ್ತಾದರೂ ನಮಗೆ ಕರೆಯಬಹುದು. ದೆಹಲಿಯಲ್ಲಿ ಸಭೆ ನಡೆಯುತ್ತಿದೆ ಎಂದರು.