ಬೆಂಗಳೂರು, ಮಾ 15(DaijiworldNews/MS): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆ ಬಾಲಕಿ ಯಡಿಯೂರಪ್ಪ ವಿರುದ್ಧ ದಾಖಲಿಸಿದ್ದಾಳೆ.
ಒಂದೆಡೆ ಲೋಕಸಭೆ ಚುನಾವಣೆ ದಿನಗಣನೆ ಹತ್ತಿರವಾಗುತ್ತಿದ್ದು, ಈ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ದೆಹಲಿ - ಬೆಂಗಳೂರು ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರು ಈ ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿದಂತಾಗಿದ್ದು, ಬಂಧನಯನ್ನು ಭೀತಿಯನ್ನು ಎದುರಿಸುತ್ತಿದ್ದಾರೆ.