ಮಂಡ್ಯ, ಮಾ 15(DaijiworldNews/AK): ನನ್ನ ಜನ್ಮ ಭೂಮಿ ಹಾಸನ. ರಾಜಕೀಯ ಭವಿಷ್ಯ ನೀಡಿದ್ದು ರಾಮನಗರ. ನನ್ನ ಜೀವ ಮಿಡಿಯುವುದು ಮಂಡ್ಯಗಾಗಿ. ಸ್ವಾಭಿಮಾನ ಎನ್ನುವುದು ಮಾತಿನಲ್ಲಿ ಅಲ್ಲ, ಕೆಲಸದಲ್ಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿದರು.
https://daijiworld.ap-south-1.linodeobjects.com/Linode/img_tv247/15-03-2024AKHDK.jpg
ಸುಮಲತಾ ಅಂಬರೀಶ್ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಏನೋ ಆಗಿತ್ತು. ಈಗ ನಾವು ಸಂಘರ್ಷ ಮುಂದುವರಿಸಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆ ಸಂಬಂಧ ಜೆಡಿಎಸ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸುಮಲತಾ ಅಂಬರೀಶ್ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಏನೋ ಆಗಿತ್ತು. ಈಗ ನಾವು ಸಂಘರ್ಷ ಮುಂದುವರಿಸಲ್ಲ. ಚುನಾವಣೆ ವಿಷಯದಲ್ಲಿ ಒಂದು ಮಾತು ಹೇಳುತ್ತೇನೆ. ಅಂಬರೀಶ್, ನಾವೆಲ್ಲ ಒಟ್ಟಾಗಿ, ಪ್ರೀತಿಯಿಂದ ಬೆಳೆದವರು. ನಮ್ಮ ಪಕ್ಷದಿಂದಲೇ ಅಂಬರೀಶ್ ಪಾರ್ಲಿಮೆಂಟ್ ಪ್ರವೇಶ ಮಾಡಿದ್ದರು ಎಂದರು.
ಅಂಬರೀಶ್ ನನ್ನ ಆತ್ಮೀಯ ಸ್ನೇಹಿತ. ಆತನಿಗೆ ನಮನ ಸಲ್ಲಿಸಬೇಕಾಗಿದ್ದು ನನ್ನ ಕರ್ತವ್ಯ. ಅಂಬರೀಶ್ ಬಡ ಕುಟುಂಬದಿಂದ ಸಿನಿಮಾರಂಗದಲ್ಲಿ ಸಾಧನೆ ಮಾಡಿದ ನಮ್ಮ ಸಮಾಜದ ವ್ಯಕ್ತಿ. ಅಂಬರೀಶ್ಗೆ ಗೌರವ ನೀಡುವ ಮೂಲಕ ಮಂಡ್ಯ ಜನರಿಗೂ ಗೌರವ ನೀಡಿದ್ದೇವೆ. 2019, 2023ರ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನತೆ ನಮಗೆ ಅನ್ಯಾಯ ಮಾಡಲಿಲ್ಲ. ಮಂಡ್ಯ ಜಿಲ್ಲೆಯ ಮತದಾರ ಬಂಧುಗಳೇ ನಮ್ಮ ತಂದೆ-ತಾಯಿಯಂದಿರು. ರಾಜಕೀಯವಾಗಿ ನಮ್ಮಿಂದ ಸಣ್ಣಪುಟ್ಟ ತಪ್ಪುಗಳಾಗಿರಬಹುದು. ಈ ಜಿಲ್ಲೆಯ ಜನತೆಗೆ ಸ್ಪಷ್ಟ ಮನವಿ ಮಾಡಲು ಬಯಸುತ್ತೇವೆ. ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ. ತಪ್ಪು ತಿದ್ದಿಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.
ಮಂಡ್ಯ ಜಿಲ್ಲೆಯ ಜನರ ಜೊತೆ ಮೊದಲಿಂದಲೂ ನಾನು ಇದ್ದೇನೆ. 2019ರಲ್ಲಿ ಹೊಂದಾಣಿಕೆ ಎಂದು ಕುತ್ತಿಗೆ ಕೊಯ್ದರು. ಅದಕ್ಕೆ ಉತ್ತರ ಕೊಡುವ ಶಕ್ತಿ ಮಂಡ್ಯ ಜನರ ಕೈಯಲ್ಲಿ ಇದೆ ಎಂದು ಹೇಳಿದರು.