ನವದೆಹಲಿ, 17(DaijiworldNews/ AK): ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಭಾನುವಾರ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇದರ ಬೆನ್ನಲ್ಲೇ ಸುಮಲತಾ ಅವರನ್ನು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ಚಿಂತನೆ ನಡೆಸಿದೆ ಎಂಬ ವದಂತಿ ಕೇಳಿ ಬಂದಿದೆ. ನಿನ್ನೆ ನಡ್ಡಾ ಅವರ ಆಹ್ವಾನದಂತೆ ರಾಜಕೀ ಯ ಪರಿಸ್ಥಿತಿ ಕುರಿತು ಚರ್ಚಿಸಲು ಆಗಮಿಸಿದ್ದೇನೆ ಎಂ ದು ಸುಮಲತಾ ತಿಳಿಸಿದರು. ಆದರೆ ಇದೇ ವೇಳೆ ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.
ಚಿಕ್ಕಬಳ್ಳಾಪುರ ಕ್ಷೇ ತ್ರದ ಸಂಸದ, ಬಿಜೆಪಿಯ ಬಿ.ಎನ್.ಬಚ್ಚೇ ಗೌಡ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ. ಈ ಹಿನ್ನಲೆಯಲ್ಲಿ ಸುಮಲತಾ ಅವರು 2019ರಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇ ತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರಾಭವಗೊಂಡಿದ್ದರು. ಆದರೆ ಪ್ರಸ್ತುತ, ಸೀಟು ಹಂಚಿಕೆ ವಿಚಾರದಲ್ಲಿ ಮಂಡ್ಯ ಕ್ಷೇತ್ರವು ಜೆಡಿಎಸ್ ಪಾಲಾಗಿದೆ.
ಒಂದು ವೇಳೆ ಬಿಜೆಪಿ ಸುಮಲತಾ ಅವರನ್ನು ಕಣಕ್ಕಿಳಿಸಿದರೆ, ಅವರ ಪರ ಪ್ರಚಾರ ನಡೆಸಲು ಮೈತ್ರಿ ಪಕ್ಷ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಬಿಜೆಪಿ ಮನವಿ ಮಾಡುವ ಸಂಭವವಿದೆ. ಅದೇ ರೀತಿ ಸುಮಲತಾ ಅವರಿಗೂ ಜೆಡಿಎಸ್ ಅಭ್ಯರ್ಥಿ ಪರವಾಗಿ ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ಮಾಡುವಂತೆ ಹೇಳುವ ಸಾದ್ಯತೆ ಇದೆ. ಈ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಿಂದ ಸುಮಲತಾ ಕಣಕ್ಕಿಳಿಸುವ ಸಾಧ್ಯತೆ ಇದೆ ಮಾಹಿತಿ ಇದೆ.