ದೆಹಲಿ, ಮಾ 23(DaijiworldNews/AA): ತಮ್ಮ ಬಂಧನ ಮತ್ತು ಇಡಿ ಕಸ್ಟಡಿ ವಿಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ತುರ್ತು ವಿಚಾರಣೆಯನ್ನು ಕೋರಿ ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಇದೀಗ ಈ ಮನವಿಯನ್ನು ದೆಹಲಿ ಹೈಕೋರ್ಟ್ ಅವರ ಮನವಿಯನ್ನು ತಿರಸ್ಕರಿಸಿದೆ.
ಎಎಪಿ ಮುಖ್ಯಸ್ಥ ಕೇಜ್ರಿವಾಲ್ ಅವರನ್ನು ಸಿಬಿಐ ಗುರುವಾರ ಬಂಧಿಸಿತ್ತು. ಬಳಿಕ ಶುಕ್ರವಾರ ರೋಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿತು. ಇದೀಗ ತಮ್ಮ ಕಸ್ಟಡಿ ವಿಷಯಕ್ಕೆ ಸಂಬಂಧಿಸಿದಂತೆ ಶನಿವಾರ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದಾರೆ. ಭಾನುವಾರದೊಳಗೆ ತುರ್ತು ವಿಚಾರಣೆ ನಡೆಸುವಂತೆ ಕೇಜ್ರಿವಾಲ್ ಕೋರಿದ್ದರು.
ಆದರೆ ಹೋಳಿ ಹಬ್ಬಕ್ಕಾಗಿ ಎರಡು ದಿನಗಳು ಕೋರ್ಟ್ ಗೆ ರಜೆ ಇದ್ದು, ಬುಧವಾರ ಪುನಃ ವಿಚಾರಣೆ ನಡೆಸಲಾಗುವುದು ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ.