ಮೈಸೂರು,ಮಾ 27(DaijiworldNews/ AK):ಕರ್ನಾಟಕದಲ್ಲಿ ಭಯದಿಂದ ಬಿಜೆಪಿ-ಜೆಡಿಎಸ್ ಒಂದಾಗಿದೆ. ಇವರನ್ನು ಜನತೆ ಸೋಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಅವರು ಇಂದು ಅನ್ಯ ಪಕ್ಷಗಳ ವಿವಿಧ ಮುಖಂಡರುಗಳ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಕಾಂಗ್ರೆಸ್ ಗೆ ಶಕ್ತಿ , ಸಿದ್ದಾಂತವನ್ನು ಒಪ್ಪಿ ಯಾವುದೇ ಷರತ್ತು ವಿಧಿಸದೇ ಕಾಂಗ್ರೆಸ್ ಸೇರಿದವರನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ ಎಂದರು.
ಸ್ಥಾನಮಾನಕ್ಕಾಗಿ ಅಲ್ಲದೇ ಕಾಂಗ್ರೆಸ್ ಪಕ್ಷ ಬಿಜೆಪಿ ಬಿಡಲು ಅಲ್ಲಿ ಗೌರವಯುತವಾಗಿ ನಡೆಸಿಕೊಳ್ಳಲಿಲ್ಲ ಹಾಗೂ ಪಕ್ಷ ಬಡವರ ಪರವಾಗಿದೆ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಸೇರಿದ್ದಾರೆ. ರಾಜಕೀಯ, ಸಾಮಾಜಿಕ ಕೇತ್ರದಲ್ಲಿ ಮೂರು ದಶಕಗಳಿಂದ ತೊಡಗಿಸಿಕೊಂಡಿರುವ ರಾಜೀವ್ ಅವರು ಕಾಂಗ್ರೆಸ್ಸಿನ ಕಾರ್ಯಕ್ರಮಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿರುವುದು ಒಳ್ಳೆಯ ಬೆಳವಣಿಗೆ ಹಾಗೂ ಪಕ್ಷದ ಸಿದ್ಧಾಂತ ಒಪ್ಪಿ ಬರುವುದನ್ನು ಸೇರ್ಪಡೆ ಮಾಡಿಕೊಳ್ಳುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ ಎಂದರು.
ಕಾಂಗ್ರೆಸ್ ಪಕ್ಷ ಗೆಲ್ಲಿಸಬೇಕೆಂಬ ಗುರಿಯೊಂದಿಗೆ ಕೆಲಸ ಮಾಡಬೇಕು.ಕಾಂಗ್ರೆಸ್ ಪಕ್ಷಕ್ಕೆ ರಾಜೀವ್ ಮತ್ತು ಸೇರ್ಪಡೆಯಿಂದಾಗಿ ಶಕ್ತಿ ಬಂದಂತಾಗಿದೆ ಲೋಕಸಭಾ ಚುನಾವಣೆಯಲ್ಲಿ ರಾಜೀವ್ ಅವರು ಸೇರಿರುವುದರಿಂದ ಕೃಷ್ಣರಾಜ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಲಕ್ಷ್ಮಣ್ ಗೆಲ್ಲುವ ವಿಶ್ವಾಸವಿದೆ ಎಂದರು.
ಬಾಯಿಯಲ್ಲಿ ಮಾತ್ರ ಸಬ್ ಕಾ ಸಾಥ್:
ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಬುರ್ಖಾ, ಗಡ್ಡ, ಶಿಲುಬೆ ಹಾಕಿದವರು ಬರಬಾರದು ಎನ್ನುತ್ತಾರೆ. ಇದು ಯಾವ ಸಬ್ ಕಾ ಸಾಥ್ ಎಂದು ಪ್ರಶ್ನಿಸಿದರು. ಈ ದೇಶದಲ್ಲಿ ಹೆಚ್ಚು ಸುಳ್ಳು ಹೆಳುವ ಪ್ರಧಾನಿ ನರೇಂದ್ರ ಮೋದಿ ಎಂದರು.ಸುಳ್ಳು ಬಿಜೆಪಿಯ ಮನೆದೇವರು. 15 ಲಕ್ಷ ಪ್ರತಿ ಕುಟುಂಬದ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಅಚ್ಚೇ ದಿನ್ ಬರುತ್ತದೆ ಎಂದರು- ಬಂತೇ ಎಂದು ಪ್ರಶ್ನಿಸಿದರು.