ನವದೆಹಲಿ, ಮಾ 27(DaijiworldNews/ AK): ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅಗತ್ಯವಿರುವಷ್ಟು ಹಣ ನನ್ನ ಬಳಿ ಇಲ್ಲ. ಹೀಗಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಹೈಕಮಾಂಡ್ಗೆ ತಿಳಿಸಿದ್ದೇನೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸುವ ಆಯ್ಕೆಯನ್ನು ನೀಡಿದ್ದಾರೆ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಬಿಜೆಪಿಯ ಪ್ರಸ್ತಾಪವನ್ನು ನಿರಾಕರಿಸಿದ್ದೇನೆ ಎಂದು ತಿಳಿಸಿದ್ದಾರೆ.
ಹತ್ತು ದಿನಗಳ ಕಾಲ ಯೋಚಿಸಿದ ನಂತರ ಈ ನಿರ್ಧಾರಿಸಿ ತಿಳಿಸಿದ್ದೇನೆ. ಅದು ಆಂಧ್ರಪ್ರದೇಶ ಅಥವಾ ತಮಿಳುನಾಡೇ ಆಗಿರಲಿ. ನನಗೂ ಸಮಸ್ಯೆ ಇದೆ. ಅವರು ನನ್ನ ನಿಲುವನ್ನು ಒಪ್ಪಿಕೊಂಡಿದ್ದಾರೆ ಎಂದು ನಾನು ತುಂಬಾ ಕೃತಜ್ಞಳಾಗಿದ್ದೇನೆ.ಹಾಗಾಗಿ ನಾನು ಸ್ಪರ್ಧಿಸುವುದಿಲ್ಲ ಎಂದು ಸಚಿವೆ ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ, ದೇಶದ ಹಣಕಾಸು ಸಚಿವರ ಬಳಿ ಚುನಾವಣೆಯಲ್ಲಿ ಹೋರಾಡಲು ಏಕೆ ಸಾಕಷ್ಟು ಹಣವಿಲ್ಲ ಎಂಬ ಪ್ರಶ್ನೆಗೆ, ಭಾರತದ ಕನ್ಸಾಲಿಡೇಟೆಡ್ ಫಂಡ್ ತನಗೆ ಸೇರಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.