ಬೆಂಗಳೂರು, ಏ 04(DaijiworldNews/AK): ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರು ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮತ್ತಿತರ ಮುಖಂಡರು ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ ಅವರು, ಹಾಸನ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುತ್ತಿದ್ದಾರೆ. ರಾಜ್ಯದಲ್ಲಿ ಎನ್ಡಿಎ ಮಿತ್ರ ಕೂಟಕ್ಕೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಬೇಕು ಎಂಬ ಭಾವನೆ ಜನರಲ್ಲಿದೆ ಎಂದು ತಿಳಿಸಿದರು.2047ರಲ್ಲಿ ಭಾರತವು ವಿಕಸಿತ ಭಾರತವಾಗುವ ಕನಸನ್ನು ನನಸು ಮಾಡಲು ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಆಶಿಸಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಗಳಾದ ಗೋವಿಂದ ಕಾರಜೋಳ ಅವರು ಚಿತ್ರದುರ್ಗದ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಗಾಂಧಿ ಸರ್ಕಲ್ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಕೇಂದ್ರ ಸಚಿವ ಎ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ವಿಧಾನಪರಿಷತ್ ಮುಖ್ಯ ಸಚೇತಕ ಎನ್ ರವಿಕುಮಾರ್, ಶಾಸಕರಾದ ಎಂ ಚಂದ್ರಪ್ಪ, ಗಾಲಿ ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್ ನವೀನ್, ಮಾಜಿ ಶಾಸಕರಾದ ಜಿ.ಹೆಚ್ ತಿಪ್ಪಾರೆಡ್ಡಿ, ಎಸ್.ತಿಪ್ಪೇಸ್ವಾಮಿ, ಎಸ್ ಕೆ ಬಸವರಾಜನ್, ಮಾಜಿ ಸಚಿವರಾದ ಬಿ.ಶ್ರೀರಾಮುಲು, ವಿಧಾನ ಪರಿಷತ್ ಸದಸ್ಯರಾದ ವೈ.ಎ ನಾರಾಯಣಸ್ವಾಮಿ, ಚಿದಾನಂದ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ, ಹನುಮಂತೆ ಗೌಡ್ರು, ಜೆಡಿಎಸ್ ಜಿಲ್ಲಾಧ್ಯಕ್ಷ ಜಯಣ್ಣ, ಮಾಜಿ ಸಂಸದರಾದ ಜನಾರ್ಧನಸ್ವಾಮಿ, ಜೆಡಿಎಸ್ ಮುಖಂಡರಾದ ಕಾಂತರಾಜ್, ಯಶೋಧರ್, ರವೀಶ್, ರವೀಂದ್ರ, ತಿಪ್ಪೇಸ್ವಾಮಿ, ಮುಂತಾದ ಬಿಜೆಪಿ ಹಾಗೂ ಜೆಡಿಎಸ್ ಜಿಲ್ಲಾ ಹಾಗು ರಾಜ್ಯ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.