ಬೆಂಗಳೂರು,ಏ 04(DaijiworldNews/AK):ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ನಟಿ ಸುಮಲತಾ ಅಂಬರೀಶ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಮೈತ್ರಿ ಕಾರಣದಿಂದಾಗಿ ಅವರಿಗೆ ಟಿಕೆಟ್ ನೀಡಲಿಲ್ಲ. ಅವರು ಈಗ ಬಿಜೆಪಿ ಸೇರಲು ಮುಂದಾಗಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಅವರು ಬರೆದು ಹಂಚಿಕೊಂಡಿದ್ದಾರೆ.
ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿ ಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದೆ.
ಬಿಜೆಪಿ ನಾಯಕರ ಸಮ್ಮುಖದಲ್ಲಿ 5 ಏಪ್ರಿಲ್ 2024ರ ಶುಕ್ರವಾರ ಬೆಳಿಗ್ಗೆ 11.30ಕ್ಕೆ ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ. ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ್ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಅವರು ಬರೆದಿದ್ದಾರೆ.