ಹುಬ್ಬಳ್ಳಿ, ಏ. 23(DaijiworldNews/AK): ನೇಹಾ ಕೊಲೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳು, ನ್ಯಾಯಾಂಗ ಬಂಧನದಲ್ಲಿದ್ದ ಆರೋ ಪಿ ಫಯಾಜ್ನ್ನು ಬುಧವಾರ ತಮ್ಮ ವಶಕ್ಕೆ ಪಡೆದಿದ್ದಾರೆ.
ಮಂಗಳವಾರದಿಂದ ತನಿಖೆ ಆರಂಭಿಸಿರುವ ಎಸ್ಪಿ ವೆಂಕಟೇ ಶ್ ನೇತೃತ್ವದ ತಂಡ, ಹೆಚ್ಚಿನ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಆರೋ ಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್ಸಿ ಕೋ ರ್ಟ್ಗೆ ಅರ್ಜಿ ಸಲ್ಲಿಸಿತ್ತು.ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.