ನವದೆಹಲಿ, ಏ.26(DaijiworldNews/AK): ಹಿಂದೂ-ಸಿಖ್ ದೇವರುಗಳು, ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಕೀಲ ಆನಂದ್ ಎಸ್ ಜೊಂಧಳೆ ಸಲ್ಲಿಸಿದ್ದು, ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಆರು ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚುನಾವಣೆಯಿಂದ ಅನರ್ಹಗೊಳಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.
ಏ.9 ರಂದು ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ವಿರುದ್ಧ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳು ಹಿಂದೂ ಮತ್ತು ಸಿಖ್ ದೇವರುಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತಗಳನ್ನು ಕೇಳಿದ್ದಾರೆ. ಮಾತ್ರವಲ್ಲದೆ, ವಿರೋಧಿ ರಾಜಕೀಯ ಪಕ್ಷಗಳು ಮುಸ್ಲಿಮರ ಪರವಾದ ಒಲುವು ಹೊಂದಿದ್ದಾರೆ ಎಂದು ಹೇಳಿದ್ದಾರೆ.