ಬೆಂಗಳೂರು, ಏ.27(DaijiworldNews/AA): ಬರ ಪರಿಹಾರದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷವು ನಾಳೆ ಬೆಳಗ್ಗೆ 9:30ಕ್ಕೆ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ. ರಾಜ್ಯಕ್ಕೆ ಬಹಳ ಕಡಿಮೆ ಬರ ಪರಿಹಾರ ಕೊಟ್ಟಿದ್ದಾರೆಂದು ನಮ್ಮ ಪಕ್ಷದ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ. ನಾನೂ ಆ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದೇನೆ ಎಂದ ತಿಳಿಸಿದರು.
ಜನವರಿ 19ರಂದು ಮುಖ್ಯಮಂತ್ರಿ ಪ್ರಧಾನಿಯನ್ನು ಭೇಟಿ ಮಾಡಿ ಬರ ಪರಿಹಾರಕ್ಕೆ ಮನವಿ ಮಾಡಿದ್ದರು. ಅಷ್ಟಾದರೂ ಬರ ಪರಿಹಾರವನ್ನು ಕೊಟ್ಟಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.