ಬೆಂಗಳೂರು, ಏ.28(DaijiworldNews/AA): ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾ ಮಾಡಿದೆ.
ಜಮೀರ್ ಆಯ್ಕೆ ಪ್ರಶ್ನಿಸಿ ಚಾಮರಾಪೇಟೆ ವಿಧಾನಸಭಾ ಕ್ಷೇತ್ರದ ಮತದಾರ ಶಶಾಂಕ್ ಜೆ. ಶ್ರೀಧರ್ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪರಿಶೀಲಿಸಿದ ನ್ಯಾ.ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಇನ್ನು ಕಾಂಗ್ರೆಸ್ ನೀಡಿದ ಗ್ಯಾರೆಂಟಿ ಪಕ್ಷಗಳ ತಪ್ಪು ಯೋಜನೆ ಎನ್ನಬಹುದು. ಆದರೆ ಚುನಾವಣಾ ಅಕ್ರಮವೆನ್ನಲು ಸಾಧ್ಯವಿಲ್ಲ. ಪ್ರಸ್ತುತ ಸ್ಥಿತಿಯಲ್ಲಿ 5 ಗ್ಯಾರಂಟಿ ತಪ್ಪು ನೀತಿಯೆನ್ನಬಹುದು. ಆದರೆ, ಇದು ಚುನಾವಣಾ ಭ್ರಷ್ಟಾಚಾರ ಎನ್ನಲು ಸಾಧ್ಯವಿಲ್ಲ ಎಂದು ತಿಳಿಸಿದೆ.