ಶಿವಮೊಗ್ಗ, ಏ.29(DaijiworldNews/AA): ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ. ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷದಿಂದ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಸಮಾನವಾಗಿದೆ. ತನಿಖೆಗೆ ಸರ್ಕಾರ ಈಗಾಗಲೇ ಎಸ್ಐಟಿ ರಚಿಸಿದೆ. ತನಿಖೆಯಿಂದ ಸತ್ಯ ಹೊರಬರಲಿ. ಯಾರೇ ತಪ್ಪು ಮಾಡಿರಲಿ ಅವರಿಗೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ.
ಇನ್ನು ಪ್ರಜ್ವಲ್ ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆಂದು ನನಗೇನು ಗೊತ್ತು? ಹಾಸನದಲ್ಲಿ ಚುನಾವಣೆಗೆ ಮೂರು ದಿನ ಮೊದಲು ಪೆನ್ ಡ್ರೈವ್ ಮೂಲಕ ಅಪಪ್ರಚಾರ ಮಾಡಲಾಗಿದೆ ಎಂದರು.