ಚಿತ್ರದುರ್ಗ, ಏ.2(DaijiworldNews/AK):ಸುಪ್ರೀಂ ಕೋರ್ಟ್ ಆದೇಶದಂತೆ ಇಂದು ಒಂದನೇ ಅಪರ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಮುಂದೆ ಶರಣಾಗಿದ್ದ ಮುರುಘಾ ಶ್ರೀಗೆ ಮೇ 27ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಪೋಕ್ಸೊ ಕೇಸಲ್ಲಿ ಸತತ ಒಂದು ವರ್ಷ ಜೈಲು ಸೇರಿದ್ದ ಮುರುಘಾ ಶ್ರೀಗೆ 7 ಷರತ್ತು ವಿಧಿಸಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಅದನ್ನು ಪ್ರಶ್ನಿಸಿ ಮಠದ ಭಕ್ತ ಹಾಗೂ ಮಾಜಿ ಸಚಿವ ಹೆಚ್ ಏಕಾಂತಯ್ಯ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಇನ್ನು ಈ ಕೇಸ್ನ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮುರುಘಾ ಶ್ರೀಗೆ ಮಂಜೂರಾಗಿದ್ದ ಜಾಮೀನನ್ನು ರದ್ದುಗೊಳಿಸಿ ಆದೇಶಿಸಿದ್ದು, ಒಂದು ವಾರದೊಳಗೆ ಕೋರ್ಟ್ ಮುಂದೆ ಹಾಜಾರಾಗುವಂತೆ ಸೂಚಿಸಿತ್ತು.
ನ್ಯಾಯಾಧೀಶರ ಮುಂದೆ ಹಾಜರಾದ ಮುರುಘಾ ಶ್ರೀ ಕೇಸ್ನ ವಿಚಾರಣೆಯನ್ನು ಮೇ 27ಕ್ಕೆ ನಿಗದಿಪಡಿಸಿರುವ ಒಂದನೇ ಅಪರ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಅಲ್ಲಿಯವರೆಗೆ ಮುರುಘಾ ಶ್ರೀ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.