ಗುವಾಹಟಿ, ಏ.30(DaijiworldNews/AA): ಬಿಜೆಪಿಯು 3ನೇ ಅವಧಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವ ಮತ್ತು ಮೀಸಲಾತಿಯನ್ನು ರದ್ದುಗೊಳಿಸುವ ಉದ್ದೇಶ ಹೊಂದಿದೆ ಎಂಬ ಸುಳ್ಳುಗಳನ್ನು ಕಾಂಗ್ರೆಸ್ ಪಕ್ಷ ಹರಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರ ಆಶೀರ್ವಾದ ಹಾಗೂ ಬೆಂಬಲದಿಂದ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಧರ್ಮದ ಆಧಾರದ ಮೇಲೆ ಜನರಿಗೆ ಮೀಸಲಾತಿ ನೀಡುವುದನ್ನು ಬಿಜೆಪಿ ಪಕ್ಷ ವಿರೋಧಿಸುತ್ತದೆ. ಏಕರೂಪ ನಾಗರಿಕ ಸಂಹಿತೆ ಜಾರಿ ಪರ ನಮ್ಮ ಪಕ್ಷ ನಿಂತಿದೆ ಎಂದರು.
ಇನ್ನು ದಕ್ಷಿಣದ ರಾಜ್ಯಗಳ ಮತದಾರರೂ ಪಕ್ಷಕ್ಕೆ ಉತ್ತಮ ಬೆಂಬಲ ನೀಡುತ್ತಿದ್ದಾರೆ. ಅಸ್ಸಾಂನ 14 ಲೋಕಸಭಾ ಸ್ಥಾನಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದರು.