ಬೆಂಗಳೂರು, ಏ. 30(DaijiworldNews/AK): ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಗೆ ಹಾಜರಾಗುವಂತೆ ಆರೋಪಿಗಳಾದ ಎಚ್.ಡಿ.ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರಿಗೆ ಎಸ್ಐಟಿ ಅಧಿಕಾರಿಗಳು ಮಂಗಳವಾರ ನೋಟಿಸ್ ಜಾರಿ ಮಾಡಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳ ಹೇಳಿಕೆ ಅಗತ್ಯವಿದೆ. ಹೀಗಾಗಿ, ಸಿಆರ್ಪಿಸಿ 41 (ಎ) ಅಡಿ ರೇವಣ್ಣ ಹಾಗೂ ಪ್ರಜ್ವಲ್ಗೆ ನೋಟಿಸ್ ನೀಡಲಾಗಿದೆ ಎಂದು ಎಸ್ಐಟಿ ಮೂಲಗಳಿಂದ ತಿಳಿದು ಬಂದಿದೆ.
ನೋ ಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ವಿಚಾರಣೆಗೆ ಹಾಜರಾಗದಿದ್ದರೆ ಮುಂದಿನ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಲಾಗಿದೆ ಎಂದು ತಿಳಿಸಿವೆ.