ಬೆಂಗಳೂರು, ಮೇ.1(DaijiworldNews/AA): ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧಿಸಿದಂತೆ ಮಹಿಳಾ ಆಯೋಗದ ಎಂಟ್ರಿ ಬಳಿಕ ಇದೀಗ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಂಟ್ರಿ ನೀಡಿದೆ.
ಪ್ರಜ್ವಲ್ ರೇವಣ್ಣ ಪ್ರಕರಣದ ಸಮಗ್ರ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಚಿಸಲಾಗಿತ್ತು. ಇದೀಗ ಎಸ್ಐಟಿ ಮುಖ್ಯಸ್ಥರಿಗೆ ಸಿಂಗ್ಗೆ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಪತ್ರವನ್ನ ಬರೆದಿದ್ದಾರೆ.
ಸಂತ್ರಸ್ತೆಯೊಬ್ಬರು ತನ್ನ ಮಗಳೊಂದಿಗೆ ಕೂಡ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ತಿಳಿಸಿದ್ದಾರೆ. ಪ್ರಕರಣದಲ್ಲಿ ಆರೋಪಿ ಅಪ್ರಾಪ್ತ ಹೆಣ್ಣು ಮಕ್ಕಳನ್ನ ಬಳಸಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಅನುಮಾನ ಇದೆ. ಆದ್ದರಿಂದ ಪ್ರಕರಣದಲ್ಲಿ ಆರೋಪಿಯಿಂದ ಅಪ್ರಾಪ್ತ ಹೆಣ್ಣು ಮಕ್ಕಳ ಬಳಕೆ ಪತ್ತೆಯಾದಲ್ಲಿ ಈ ಬಗ್ಗೆ ವರದಿ ನೀಡುವಂತೆ ಎಸ್ಐಟಿಗೆ ಮಕ್ಕಳ ಆಯೋಗ ಪತ್ರ ಬರೆದಿದೆ.