ಹುಬ್ಬಳ್ಳಿ, ಮೇ.1(DaijiworldNews/AK): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್ ಕುಟುಂಬಸ್ಥರಿಂದ ಭೇಟಿ ಮಾಡಿದರು.
ಭೇಟಿ ಬಳಿಕ ಅಮಿತ್ ಶಾಗೆ ಎಲ್ಲಾ ಮಾಹಿತಿಯನ್ನು ನೀಡಿ ಆದಷ್ಟು ಬೇಗ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮನವಿ ಸಲ್ಲಿಸಿದರು.
ಕೊಲೆ ಆರೋಪಿಗೆ ಉಗ್ರ ಶಿಕ್ಷೆಯಾಗುವ ನಿಟ್ಟಿನಲ್ಲಿ ವಿಶೇಷ ಕಾಯ್ದೆ ತರಲು ಮನವಿ ಮಾಡಿದ್ದೇವೆ. ಈ ಬಗ್ಗೆ ಮನವಿ ಪತ್ರ ನೀಡಿದ್ದೇವೆ. ನಮ್ಮ ಮನವಿಗೆ ಅಮಿತ್ ಶಾ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.