ಬೆಂಗಳೂರು, ಮೇ.3(DaijiworldNews/AK):ಮನೆಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಲುಕ್ಔಟ್ ನೋಟಿಸ್ ನೀಡಲಾಗಿದೆ.
![](https://daijiworld.ap-south-1.linodeobjects.com/Linode/img_tv247/03-05-2024AKREVANNA.jpg)
ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ಕೊಟ್ಟಿದ್ದರೂ ರೇವಣ್ಣ ಗೈರಾಗಿದ್ದಾರೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಹಿನ್ನೆಲೆಯಲ್ಲಿ ಲುಕ್ಔಟ್ ನೋಟಿಸ್ ಕೊಡಲಾಗಿದೆ.ಎರಡನೇ ಪ್ರಕರಣದ ಬಳಿಕ ರೇವಣ್ಣಗೆ ನೋಟಿಸ್ ನೀಡಲಾಗಿದೆ.ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ದಾರೆ.
ಇತ್ತ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡ ಕ್ರಿಮಿನಲ್ ಪ್ರಕರಣದಲ್ಲಿ ಮಹಿಳೆಯೊಬ್ಬರ ಅಪಹರಣಕ್ಕೆ ಪ್ರತ್ಯೇಕ ಎಫ್ಐಆರ್ಗೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ.ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಜಾಮೀನು ಮಂಜೂರಾತಿ ಕೋರಿಕೆಯನ್ನು ನಾಳೆ (ಮೇ 4) ಆಲಿಸಿ ಆದೇಶ ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ.
ಈ ಪ್ರಕರಣ ಸಂಬಂಧಪಟ್ಟಂತೆ ಇದೀಗ ರೇವಣ್ಣ ಪತ್ನಿ ಭವಾನಿ ರೇವಣ್ಣಗೂ ವಿಶೇಷ ತನಿಖಾ ತಂಡ (SIT) ನೋಟಿಸ್ ರವಾನಿಸಿ ಶನಿವಾರದ ಒಳಗಡೆ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದೆ.