ಬೆಂಗಳೂರು, ಮೇ.4(DaijiworldNews/AA): ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಮಹಿಳೆಯ ಅಪಹರಣ ಪ್ರಕರಣ ಸಂಬಂಧಿಸಿದಂತೆ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿತ್ತು. ಸುಮಾರು 2 ಗಂಟೆಗಳ ವಿಚಾರಣೆ ನಡೆಸಿದ ನ್ಯಾಯಾಲಯ ಕೆಲ ಕಾಲ ತೀರ್ಪು ಕಾಯ್ದಿರಿಸಿತ್ತು. ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಮೇ6 ಕ್ಕೆ ವಿಚಾರಣೆ ಮುಂದೂಡಿದೆ.