ಶ್ರೀನಗರ, ಮೇ.4(DaijiworldNews/AA): ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದು, ಐವರು ಐಎಎಫ್ ಅಧಿಕಾರಿಗಳು ಗಾಯಗೊಂಡಿದ್ದಾರೆ.
ದಾಳಿ ಹಿನ್ನೆಲೆಯಲ್ಲಿ ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ ಎಂದು ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಗ್ರರು ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಸುಮಾರು 30 ಸುತ್ತು ಗುಂಡು ಹಾರಿಸಿದ್ದಾರೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ. ಆದರೆ, ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.