ಹಿಮಾಚಲ ಪ್ರದೇಶ, ಮೇ.13(DaijiworldNews/AA): ನಮಗೆ ನಿಜವಾಗಿಯೂ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ. ಚಿಂತನೆಯ ಸ್ವಾತಂತ್ರ್ಯ, ಸನಾತನ ಸ್ವಾತಂತ್ರ್ಯ, ನಮ್ಮ ಧರ್ಮವನ್ನು ಸ್ವೀಕರಿಸುವ ಸ್ವಾತಂತ್ರ್ಯ, ಈ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಸ್ವಾತಂತ್ರ್ಯ ನಮಗೆ ದೊರಕಿದೆ ಎಂದು ಬಿಜೆಪಿ ಅಭ್ಯರ್ಥಿ ಕಂಗನಾ ರಾಣಾವತ್ ಹೇಳಿದ್ದಾರೆ.
ಕುಲುವಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ನಮ್ಮ ಪೂರ್ವಜರು ಮೊಘಲರ ಗುಲಾಮಗಿರಿ, ಬ್ರಿಟಿಷರ ಗುಲಾಮಗಿರಿ ಮತ್ತು ಕಾಂಗ್ರೆಸ್ನ ದುರಾಡಳಿತವನ್ನು ನೋಡಿದ್ದಾರೆ. 1947ರಲ್ಲಿ ಪಾಕಿಸ್ತಾನವನ್ನು ತನ್ನ ಧರ್ಮದ ಆಧಾರದ ಮೇಲೆ ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಿದಾಗ, ಭಾರತವನ್ನು ಹಿಂದೂ ರಾಷ್ಟ್ರವೆಂದು ಏಕೆ ಘೋಷಿಸಲಿಲ್ಲ? ಎಂದು ಪ್ರಶ್ನಿಸಿರುವ ಅವರು, ನಾವು ಅದನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಚುನಾವಣಾ ಸಂದರ್ಭದಲ್ಲಿ ನಟಿ ಕಂಗನಾ ಅವರು ನೀಡಿರುವ ಹೇಳಿಕೆಯು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಹಿಂದೊಮ್ಮೆ ಕೂಡ ಕಂಗನಾ ಈ ರೀತಿಯ ಹೇಳಿಕೆ ನೀಡಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.