ಒಡಿಶಾ, ಮೇ.(DaijiworldNews/AA): ಸಂವಿಧಾನದ ಪುಸ್ತಕವನ್ನು ಹರಿದು ಬಿಸಾಡಲು ಬಿಜೆಪಿ ಬಯಸುತ್ತಿದೆ. ಆದರೆ ಹಾಗೇ ಆಗಲು ಕಾಂಗ್ರೆಸ್ ಹಾಗೂ ಈ ದೇಶದ ಜನತೆ ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಒಡಿಶಾದ ಬೋಲಂಗೀರ್ನಲ್ಲಿ ಚುನಾವಣಾ ಸಮಾವೇಶದ ವೇಳೆ ಮಾತನಾಡಿದ ಅವರು, ಬಿಜೆಪಿಯು ಸಂವಿಧಾನವನ್ನು ನಾಶಪಡಿಸಲು ಮತ್ತು ಮೀಸಲಾತಿಯನ್ನು ರದ್ದುಗೊಳಿಸಲು ಬಯಸುತ್ತಿದೆ. ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ದೇಶವನ್ನು 22 ಬಿಲಿಯನೇರ್ಗಳು ನಡೆಸಲಿದ್ದು, ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸಲಿದೆ ಎಂದು ಆರೋಪಿಸಿದರು.
ಇನ್ನು ಬಿಜೆಪಿ ಗೆದ್ದರೆ ಆದಿವಾಸಿಗಳು, ದಲಿತರು, ಹಿಂದುಳಿದ ವರ್ಗಗಳಿಗೆ ನೀಡಲಾಗಿರುವ ಮೀಸಲಾತಿಯನ್ನು ರದ್ದುಗೊಳಿಸಲಿದೆ. ಹೀಗಾಗಿ ಜನಪರ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಅವರು ಹೇಳಿದರು.