ನವದೆಹಲಿ, ಮೇ. 15(DaijiworldNews/AK): ಪೌರತ್ವ ತಿದ್ದುಪಡಿ ಕಾಯ್ದೆ (CAA) ಅಧಿಕೃತವಾಗಿ ಜಾರಿಯಾದ ಬಳಿಕ ಇಂದು 14 ಜನರಿಗೆ ಮೊದಲ ಬಾರಿಗೆ ಪೌರತ್ವ ಪ್ರಮಾಣ ಪತ್ರವನ್ನು ಕೇಂದ್ರ ಗೃಹ ಇಲಾಖೆ ನೀಡಿದೆ.
ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಪ್ರಮಾಣ ಪತ್ರ ವಿತರಿಸಿದರು. ಮೊದಲ ಹಂತದಲ್ಲಿ 14 ಮಂದಿ ಸೇರಿದಂತೆ ೩00 ಮಂದಿಗೆ ಪೌರತ್ವ ಪ್ರಮಾಣ ಪತ್ರ ನೀಡಲಾಗುತ್ತಿದೆ. ಇದಕ್ಕಾಗಿ ತಯಾರಿಸಿ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದ್ದ 14 ಜನರ ಅರ್ಜಿಗಳ ಪ್ರಕ್ರಿಯೆಯನ್ನು ಅಜಯ್ ಭಲ್ಲಾ ಪೂರ್ಣಗೊಳಿಸಿದರು.
2014 ರ ಡಿಸೆಂಬರ್ 31 ಅಥವಾ ಅದಕ್ಕೂ ಮೊದಲು ಭಾರತಕ್ಕೆ ಬಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ರಾಷ್ಟ್ರೀಯತೆಯನ್ನು ನೀಡಲು ಡಿಸೆಂಬರ್ 2019 ರಲ್ಲಿ CAA ಅನ್ನು ಜಾರಿಗೊಳಿಸಲಾಗಿದೆ.
ಇದರಲ್ಲಿ ಹಿಂದೂಗಳು, ಸಿಖ್ಗಳು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದ್ದಾರೆ. ಕಳೆದ ಮಾರ್ಚ್ 11 ರಂದು ಪೌರತ್ವ ತಿದ್ದುಪಡಿ ಕಾಯ್ದೆ ಯ ಅಧಿಸೂಚನೆ ಹೊರಡಿಸಲಾಗಿತ್ತು