ನವದೆಹಲಿ, ಮೇ. 21(DaijiworldNews/AK): ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ದೆಹಲಿ ಪೊಲೀಸರ ವಿಶೇಷ ತನಿಖಾ ತಂಡ(ಎಸ್ಐಟಿ) ರಚನೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಖ್ಯಮಂ ತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವರ ಮನೆಗೆ ತೆರಳಿದ್ದ ವೇಳೆ ಮಾಲಿವಾಲ್ ಮೇಲೆ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿತ್ತು. ಇತ್ತೀಚೆಗೆ ಬಿಭವ್ ಕುಮಾರ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಉತ್ತರ ದೆಹಲಿಯ ಹೆಚ್ಚುವರಿ ಡಿಸಿಪಿ ಅಂಜಿತಾ ಚೆಪ್ಯಾಲಾ ಅವರು ಎಸ್ಐಟಿ ನೇತೃತ್ವವಹಿಸಿದ್ದಾರೆ. ಇನ್ಸ್ಪೆಕ್ಟರ್ ಶ್ರೇಣಿಯ ಮೂವರು ಅಧಿಕಾರಿಗಳು, ಬಿಭವ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿರುವ ಸಿವಿಲ್ ಲೈನ್ ಪೊಲೀಸ್ ಠಾಣೆ ಒಬ್ಬ ಅಧಿಕಾರಿಯೂ ಎಸ್ಐಟಿಯಲ್ಲಿದ್ದಾರೆ.
ಮೇ 13ರಂದು ಮಾಲಿವಾಲ್ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾದ ದೆಹಲಿ ಸಿಎಂ ಅರವಿಂದ ಕೇಜ್ರಿ ವಾಲ್ ಅವರ ಮನೆಯ ಡ್ರಾಯಿಂಗ್ ಕೊಠಡಿಗೆ ಬಿಭವ್ ಕುಮಾರ್ ಅವರನ್ನು ಸೋಮವಾರ ಕರೆದೊಯ್ದಿದ್ದ ದೆಹಲಿ ಪೊಲೀಸರು ಘಟನೆ ಸಂಬಂಧ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದಾರೆ.