ರಾಯ್ಪುರ, ಮೇ 23 (DaijiworldNews/ AK): ಛತ್ತೀಸ್ಗಢದ ನಾರಾಯಣಪುರ-ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿರುವ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ 7 ನಕ್ಸಲರು ಸಾವನ್ನಪ್ಪಿದ್ದಾರೆ.
ಬೆಳಗ್ಗೆ ಭದ್ರತಾ ಪಡೆಗಳ ತಂಡವು ಕಾರ್ಯಾಚರಣೆ ನಡೆಸಿತು. ಈ ವೇಳೆ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ನಾರಾಯಣಪುರ ಪೊಲೀಸ್ ಅಧೀಕ್ಷಕ (ಎಸ್ಪಿ) ಪ್ರಭಾತ್ ಕುಮಾರ್ ತಿಳಿಸಿದ್ದಾರೆ.
ಈವರೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಮಾವೋವಾದಿ ಸಮವಸ್ತ್ರದಲ್ಲಿದ್ದ ಏಳು ನಕ್ಸಲರು ಸಾವನ್ನಪ್ಪಿದ್ದರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ. ಎನ್ಕೌಂಟರ್ ಸ್ಥಳದಿಂದ ಏಳು ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಈ ವರ್ಷ ಇಲ್ಲಿಯ ವರೆಗೆ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಒಟ್ಟು 112 ನಕ್ಸಲರು ಹತ್ಯೆಯಾಗಿದ್ದಾರೆ.