ನವದೆಹಲಿ, ಮೇ 26 (DaijiworldNews/AK): ಶನಿವಾರ ತಡರಾತ್ರಿ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರಿ ಬೆಂಕಿಯಲ್ಲಿ ಕನಿಷ್ಠ ಏಳು ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್ನಲ್ಲಿ ರಾತ್ರಿ 11.32 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು ತಿಳಿಸಿದ್ದು, 16 ಅಗ್ನಿಶಾಮಕ ಟೆಂಡರ್ಗಳನ್ನು ಸ್ಥಳಕ್ಕೆ ಧಾವಿಸಲಾಯಿತು.
ಕಟ್ಟಡದ ಮೊದಲ ಮಹಡಿಯಿಂದ 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಂಕಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ ಮತ್ತು ಆಸ್ಪತ್ರೆಯ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ "ಹೃದಯ ವಿದ್ರಾವಕ" ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.ಘಟನೆಯ ಕಾರಣಗಳನ್ನು ತನಿಖೆ ಮಾಡಲಾಗುತ್ತಿದೆ ಮತ್ತು ಈ ನಿರ್ಲಕ್ಷ್ಯಕ್ಕೆ ಕಾರಣರಾದವರನ್ನು ಬಿಡಲಾಗುವುದಿಲ್ಲ" ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.