ನವದೆಹಲಿ, ಮೇ 26 (DaijiworldNews/AK): ಬಿಜೆಪಿ ಎಂದಿಗೂ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬದಲಾಯಿಸುವುದಿಲ್ಲ, ಮೀಸಲಾತಿಯನ್ನು
ಕೊನೆಗೊಳಿಸುವುದಿಲ್ಲ ಎಂದು ಕೇಂದ್ರ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
1976 ರಲ್ಲಿ ಕಾಂಗ್ರೆಸ್ ಸಂವಿಧಾನದ ಪೀಠಿಕೆಯನ್ನು ಬದಲಾಯಿಸಿತ್ತು, ಆದರೆ ಈಗ ಅನಗತ್ಯವಾಗಿ ಬಿಜೆಪಿಯನ್ನು ಗುರಿಯಾಗಿಸಲು ಮತ್ತು ಅದನ್ನು ಚುನಾವಣಾ ವಿಷಯವಾಗಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಟಿವಿ ಸಂದರ್ಶನದಲ್ಲಿ ಸಿಂಗ್ ಹೇಳಿದರು.1976ರಲ್ಲಿ ಇಂದಿರಾ ಗಾಂಧಿ ಮೊದಲ ಬಾರಿಗೆ ಭಾರತದ ಸಂವಿಧಾನದ ಪೀಠಿಕೆಯನ್ನು ಬದಲಾವಣೆ ಮಾಡಿದ್ದರು ಎಂದು ಹೇಳಿದರು.
ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಎಸೆಯುತ್ತಾರೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆಗೆ ರಾಜನಾಥ್ ಸಿಂಗ್ ಅವರು ಈ ತಿರುಗೇಟು ನೀಡಿದ್ದಾರೆ.ಜಾತಿ ಆಧಾರಿತ ಮೀಸಲಾತಿ ವ್ಯವಸ್ಥೆಯನ್ನು ಬದಲಾವಣೆ ಮಾಡಲು ಬಿಜೆಪಿ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದರು.